ಲಕ್ಷ್ಮಿ

ಒಲಿದೆ ಯಾತಕಮ್ಮಾ ಲಕುಮಿ?

ಒಲಿದೆ ಯಾತಕಮ್ಮಾ ಲಕುಮಿ ವಾಸುದೇವಗೆ? ಹಲವಂಗದವನ ಹವಣೆ ತಿಳಿದೂ ತಿಳಿದೂ ತಿಳಿಯದ ಹಾಗೆ! || ಒಲಿದೆ ಯಾತಕಮ್ಮಾ ಲಕುಮಿ?|| ಕಮಲಗಂಧಿ ಕೋಮಲಾಂಗಿ ಸುಂದರಾಬ್ಜವದನೆ ನೀನು ರಮಣ ಮತ್ಸ್ಯ ಕಠಿಣಕಾಯ ಸೂಕರಾಸ್ಯನು ರಮಣೀಯ ಸ್ವರೂಪಿ ನೀನು ಅಮಿತಘೋರ ರೂಪನವನು
ದಾಸ ಸಾಹಿತ್ಯ ಪ್ರಕಾರ

ಭಾಗ್ಯದ ಲಕ್ಷ್ಮೀ ಬಾರಮ್ಮಾ

ಭಾಗ್ಯದ ಲಕ್ಷ್ಮೀ ಬಾರಮ್ಮಾ ನಮ್ಮಮ್ಮ ನೀ ಸೌ (ಭಾಗ್ಯದ) ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆ ಕಾಲ್ಗಳ ಧ್ವನಿಯ ತೋರುತ ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ (ಭಾಗ್ಯದ) ಕನಕ ವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೇ
ದಾಸ ಸಾಹಿತ್ಯ ಪ್ರಕಾರ
ಬರೆದವರು