ವೈರಾಗ್ಯ

ಧನದಾಸೆ ದೈನ್ಯ ಪಡಿಸುತಿದೆ

ಧನದಾಸೆ ದೈನ್ಯ ಪಡಿಸುತಿದೆ ವನಿತೆಯರಾಸೆ ಓಡಾಡಿಸುತಿದೆ ಮನದಾಸೆ ಮಂತ್ರವ ಕೆಡಿಸುತಿದೆ ಮನೆವಾರ್ತೆಯಾಸೆ ಮನವ ಬಾಧಿಸುತಿದೆ ಇನಿತರಾಸೆಯ ಬಿಡಿಸಿ ನಿನ್ನ ಚರಣಂಗಳ ನೆನೆವಂತೆ ಮಾಡೊ ಪುರಂದರವಿಠಲ _________________________ ಗುರಿಯನೆಚ್ಚವನೆ ಬಿಲ್ಲಾಳು
ದಾಸ ಸಾಹಿತ್ಯ ಪ್ರಕಾರ
ಬರೆದವರು

ಆರಿಗಾರಾಗುವರೊ ಆಪತ್ತು ಕಾಲಕ್ಕೆ

ಆರಿಗಾರಾಗುವರೊ ಆಪತ್ತು ಕಾಲಕ್ಕೆ ಆರಿಗಾರೊದಗುವರೊ ಸಂಪತ್ತು ಕಾಲಕ್ಕೆ ಆರಿಂದ ಬಪ್ಪುವುದು ಆರಿಂದ ತಪ್ಪುವುದು ಆರಿಸಿ ನೋಡುವುದು ಇದರ ಕಾರಣವನು ಇದಕಾರು ವಾರಣದಲ್ಲಿ ನೋಡಿ ಆರೋಪಿಸಲು ಎಲ್ಲಾ ಭಾರ ಅವಗೆ ಕಾರುಣ್ಯಮೂರುತಿ ಗೋಪಾಲವಿಠಲ ಈರೀತಿ ಅರಿದವಗೆ ಇಲ್ಲೇ ಪೊರೆವ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಹ್ಯಾಂಗೆ ಮಾಡಲಯ್ಯಾ, ಪೋಗುತಿದೆ ಆಯುಷ್ಯ !

ರಚನೆ : ಗೋಪಾಲದಾಸರು ಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯ ಮಂಗಳಾಂಗ ಭವಭಂಗ ಬಿಡಿಸಿ ನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ|| ಏಸು ಜನುಮದ ಸುಕೃತದ ಫಲವೊ ತಾನು ಜನಿಸಲಾಗಿ ಭೂಸುರ ದೇಹದ ಜನುಮವು ಎನಗೆ ಸಂಭವಿಸಲಾಗಿ ಮೋದತೀರ್ಥ ಮತ ಚಿಹ್ನಿತನಾಗದೆ ದೋಷಕೆ ಒಳಗಾಗಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇನ್ನೇನಿನ್ನೇನು?

ರಾಗ: ಸೌರಾಷ್ಟ್ರ ತಾಳ: ಝಂಪೆ ಮಾಯದ ಸಂಸಾರ ಮಮಕಾರ ಹಿಂಗಿತು ಇನ್ನೇನಿನ್ನೇನು ||ಪ|| ತೋಯಜಾಕ್ಷನ ದಯ ನಮಗೀಗ ದೊರಕಿತು ಇನ್ನೇನಿನ್ನೇನು ||ಅ.ಪ|| ಭಾವಿಸಿದ್ದೆಲ್ಲವು ಭೂಮಿಪಾಲಾದ ಮೇಲಿನ್ನೇನಿನ್ನೇನು ಸೇವಿಸಿದ ಗಣಪ ಮಂಗನಾದ ಮೇಲಿನ್ನೇನಿನ್ನೇನು ||೧||
ದಾಸ ಸಾಹಿತ್ಯ ಪ್ರಕಾರ
ಬರೆದವರು

ಯಾರಿಗೆ ಯಾರುಂಟು ಎರವಿನ ಸಂಸಾರ

ರಾಗ ಬಿಲಹರಿ/ಅಟ್ಟ ತಾಳ ಯಾರಿಗೆ ಯಾರುಂಟು ಎರವಿನ ಸಂಸಾರ ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ || ಪಲ್ಲವಿ || ಬಾಯಾರಿತು ಎಂದು ಬಾವಿನೀರಿಗೆ ಪೋದೆ ಬಾವಿಲಿ ಜಲ ಬತ್ತಿ ಬರಿದಾಯ್ತು ಹರಿಯೆ || ೧ || ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ ಮರ ಬಗ್ಗಿ ಶಿರದ ಮೇಲೊರಗಿತೋ ಹರಿಯೆ || ೨ ||
ದಾಸ ಸಾಹಿತ್ಯ ಪ್ರಕಾರ
ಬರೆದವರು