ವ್ಯಾಸವಿಠಲ

ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ

ತಿಳಿಯದೋ ನಿನ್ನಾಟ ತಿರುಪತಿಯ ವೆಂಕಟ |ಪ| ಪೊಳೆವ ನೀರೊಳು ಗೆಲುವ ಮೋರೆಯ ನೆಲವ ನೋಡುವ ಸುಳಿವ ಕಂಬದಿ ಇಳೆಯನಳೆಯುವ ಭಳಿರೆ ಭಾರ್ಗವ ಖಳನ ಛೇಧಿಸಿ ಕೊಳಲಧ್ವನಿಗೆ ನಳಿನಮುಖಿಯರ ನಾಚಿಸುವ ಬಲು ಹಯದಳದ ಬಹು ಹವಣೆಗಾರನೆ|| ಆರು ಬಲ್ಲರು ನಿಮ್ಮ ಶ್ರೀ ಲಕುಮಿಯ ಮನಸಿಗೆ ತೋರುವಿಯೊ ಪರಬೊಮ್ಮ ಉಳಿದವರು ಬಲ್ಲರೆ ನೀರಜಾಸನ ಬೊಮ್ಮ ಇದು ನಿನ್ನ ಮರ್ಮ ನೀರೊಳಗೆ ಮನೆ ಭಾರ ಬೆನ್ನಿಲಿ ಕೋರದಾಡೆಯ ನಾರಸಿಂಹನೆ ಧರೆಯ ಬೇಡಿದ ಧೀರಪುರುಷನೆ ವಾರಿಬಂಧನ ಮಾರಜನಕನೆ ನಾರಿಯರ ವ್ರತವಳಿದು ಕುದುರೆಯನೇರಿ ಮೆರೆಯುವ ಸುಂದರಾಂಗನೆ|| ಸಕಲಮಾಯವಿದೇನು ವೃಕನ ವಾಯು ಸಖನ ಸಲಹಿದೆ ನೀನು ಭಕುತಿಯಿಂದಲಿ ತುತಿಪರಿಗೆ ಸುರಧೇನು ಸುರಕಾಮಧೇನು ನಿಖಿಳ ವೇದೋದ್ಧಾರ ಗಿರಿಧರ ಅಖಿಳ ಭೂಮಿಯ ತಂದ ನರಹರಿ ಯುಕುತಿಯಲಿ ನೆಲನಳೆದ ಭಾರ್ಗವ ಮುಕುತಿಗೋಸುಗ ಫಲವ ಸವಿದನೆ
ದಾಸ ಸಾಹಿತ್ಯ ಪ್ರಕಾರ
ಬರೆದವರು