ಗೋಪಾಲದಾಸ

ಭಾವಾಷ್ಟ ಪುಷ್ಪಂಗಳ ದೇವಗೆ ಅರ್ಪಿಸುವ

   ಧ್ರುವ ತಾಳ
ಭಾವಾಷ್ಟ ಪುಷ್ಪಂಗಳ ದೇವಗೆ ಅರ್ಪಿಸುವ
ಭಾವನೆಯನು ಕೇಳಿ ಭಕ್ತಜನರು
ಜೀವರಿಂದ ಈ ಧರ್ಮ ಎಂದಿಗೆ ಆದದಲ್ಲ
ದೇವನಲ್ಲೇವೆ ಇಂಥ ಗುಣಗಳುಂಟು
ಭಾವಾಷ್ಟ ಪುಷ್ಪ ಗುಣವ ದೇವನಲ್ಲಿಪ್ಪವೆಂದು
ಜೀವ ತಿಳಿದರೆ ಉದ್ಧಾರ ಉಂಟು
ಜೀವರೆಂಬುವರು ಕರ್ಮ ಬದ್ಧರು ಇನ್ನು
ದೇವನು ಕರ್ಮ ತ್ರಿಗುಣಾದಿ ರಹಿತ
ಜೀವರಿಂದಲಿ ಅತ್ಯಂತ ಭೇದ ಸಾಕಾರ ಹರಿ
ಯಾವತ್ತರಾದಿ ವ್ಯಾಪ್ತ ಎಣಿ ಇಲ್ಲದ ಮೂರ್ತಿ
ಪಾವನಾಂಗ ಪಾಪನಾಶ ನಿತ್ಯತೃಪ್ತಾ

ದಾಸ ಸಾಹಿತ್ಯ ಪ್ರಕಾರ
ಬರೆದವರು

ಅಂಬಕಾದಲ್ಲಿದ್ದ ಕಂಭರೂಪದಿ ಹರಿಯ

ಅಂಬಕಾದಲ್ಲಿದ್ದ ಕಂಭರೂಪದಿ ಹರಿಯ
ಅಂಭ್ರಮಣಿ ಕಂಭಕ್ಕೆ ಸುತ್ತಲೂ ಗುಣರೂಪ
ಶಂಭುವಂದಿತ ವತ್ಸಸಂಭ್ರಮದಲಿ ಇರಲು
ಅಂಬುಜಸಮನ ಗುರುತಂದೆ ಗೋಪಾಲವಿಠಲನ
ಬೆಂಬಿದದೆ ತೋರೋ ಪ್ರಾಣ
 

--ಗೋಪಾಲದಾಸರು


 

ದಾಸ ಸಾಹಿತ್ಯ ಪ್ರಕಾರ
ಬರೆದವರು

ಗುರು ರಾಘವೇಂದ್ರರ ಚರಣ ಕಮಲವನ್ನು ಸ್ಮಸುವ ಮನುಜಗೆ

ರಾಗ - ಧನ್ಯಾಶ್ರೀ : ತಾಳ - ಏಕತಾಳ ಗುರು ರಾಘವೇಂದ್ರರ ಚರಣ ಕಮಲವನ್ನು ಸ್ಮಸುವ ಮನುಜಗೆ | ಪ | ಕರೆಕರೆಗೊಳಿಸುವ ದುರಿತ ದುಷ್ಕೃತವೆಲ್ಲ ಕರಿಯು ಕಂಡ ಸಿಂಹನ ತೆರನಾಗುವುದಯ್ಯ | ಅ ಪ | ಗುರುಮಧ್ವಮತವೆಂಬ ವರ ಕ್ಷೀರಾಂಬುಧಿಯಲ್ಲಿ ಹರಿ ಧರಿಸಿದ ಶಶಿಯಂತುದಿಸಿ |
ದಾಸ ಸಾಹಿತ್ಯ ಪ್ರಕಾರ
ಬರೆದವರು

ರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ

ರಾಗ - ಪೂರ್ವಿ : ತಾಳ - ಆದಿತಾಳ ರಥವಾನೇರಿದ ರಾಘವೇಂದ್ರ | ಸದ್ಗುಣಗಳ ಸಾಂದ್ರ | ಪ | ಸತತ ಮಾರ್ಗದಿ ಸಂತತ ಸೇವಿಪರಿಗೆ | ಅತಿಹಿತದಲಿ ಮನೋರಥವ ಕೊಡುವೆನೆಂದು | ಅ ಪ | ಚತುರ ದಿಕ್ಕು ವಿದಿಕ್ಕುಗಳಲ್ಲಿ | ಚರಿಪಾಜನರಲ್ಲಿ ಮಿತಿಲ್ಲದೆ ಬಂದು ಓಲೈಸುತಲಿ |
ದಾಸ ಸಾಹಿತ್ಯ ಪ್ರಕಾರ
ಬರೆದವರು

ಆರಿಗಾರಾಗುವರೊ ಆಪತ್ತು ಕಾಲಕ್ಕೆ

ಆರಿಗಾರಾಗುವರೊ ಆಪತ್ತು ಕಾಲಕ್ಕೆ ಆರಿಗಾರೊದಗುವರೊ ಸಂಪತ್ತು ಕಾಲಕ್ಕೆ ಆರಿಂದ ಬಪ್ಪುವುದು ಆರಿಂದ ತಪ್ಪುವುದು ಆರಿಸಿ ನೋಡುವುದು ಇದರ ಕಾರಣವನು ಇದಕಾರು ವಾರಣದಲ್ಲಿ ನೋಡಿ ಆರೋಪಿಸಲು ಎಲ್ಲಾ ಭಾರ ಅವಗೆ ಕಾರುಣ್ಯಮೂರುತಿ ಗೋಪಾಲವಿಠಲ ಈರೀತಿ ಅರಿದವಗೆ ಇಲ್ಲೇ ಪೊರೆವ ||
ದಾಸ ಸಾಹಿತ್ಯ ಪ್ರಕಾರ
ಬರೆದವರು

ರಥವಾನೇರಿದ ರಾಘವೇಂದ್ರ

ರಥವಾನೇರಿದ ರಾಘವೇಂದ್ರ ಸದ್ಗುಣಗಣಸಾಂದ್ರ ಸತತ ಮಾರ್ಗದಿ ಸಂತತ ಸೇವಿಪರಿಗೆ ಅತಿಹಿತದಲಿ ಮನೋರಥವ ಕೊಡುವೆನೆಂದು ||ಪಲ್ಲವಿ|| ಚತುರ ದಿಕ್ಕು ವಿದಿಕ್ಕುಗಳಲ್ಲಿ ಚರಿಪ ಜನರಲ್ಲಿ ಮಿತಿಯಿಲ್ಲದೆ ಬಂದೋಲೈಸುತಲಿ ವರವ ಬೇಡುತಲಿ ನುತಿಸುತ ಪರಿಪರಿ ನತರಾಗಿಹರಿಗೆ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಹ್ಯಾಂಗೆ ಮಾಡಲಯ್ಯಾ, ಪೋಗುತಿದೆ ಆಯುಷ್ಯ !

ರಚನೆ : ಗೋಪಾಲದಾಸರು ಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯ ಮಂಗಳಾಂಗ ಭವಭಂಗ ಬಿಡಿಸಿ ನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ|| ಏಸು ಜನುಮದ ಸುಕೃತದ ಫಲವೊ ತಾನು ಜನಿಸಲಾಗಿ ಭೂಸುರ ದೇಹದ ಜನುಮವು ಎನಗೆ ಸಂಭವಿಸಲಾಗಿ ಮೋದತೀರ್ಥ ಮತ ಚಿಹ್ನಿತನಾಗದೆ ದೋಷಕೆ ಒಳಗಾಗಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ನೀಲಗುದುರೆಯನ್ನೇರಿ...

ಧ್ರುವತಾಳ ನೀಲಗುದುರೆಯನ್ನೇರಿ ಶಾಲು ಸೊಂಟಕ್ಕೆ ಸುತ್ತಿ ಕಾಲುಕುಪ್ಪಸ ತೊಟ್ಟು ಮೇಲೆ ಮೋಹನ್ನ ಹಾಕಿ ಓಲ್ಯಾಡಿಸುತ್ತ ಒಂಟಿ ಢಾಳಾಗಿ ಶೋಭಿಸಲು ಸಾಲು ಬೆರಳುಂಗುರ ಕೈಲಿ ಖಡ್ಗವ ಪಿಡಿದು ತೋಳು ತಾಯಿತ ಶಿರಕೆ ಮೇಲಾದ ವಸ್ತ್ರ ಸುತ್ತಿ
ದಾಸ ಸಾಹಿತ್ಯ ಪ್ರಕಾರ
ಬರೆದವರು

ಇದು ಏನೋ ಚರಿತ...

ಇದು ಏನೋ ಚರಿತ ಯಂತ್ರೋದ್ಧಾರ ಇದು ಏನೋ ಚರಿತ ಶ್ರೀಪದುಮನಾಭನ ದೂತ ಸದಾ ಕಾಲದಲಿ ಸರ್ವರ ಹೃದಯಾಂತರ್ಗತ ವಾರಿಧಿ ಗೋಷ್ಪಾದನೀರಂತೆ ದಾಟಿದ ಧೀರ ಯೋಗಾಸನಧಾರಿಯಾಗಿಪ್ಪೋದು ದುರುಳ ಕೌರವರನ್ನು ವರಗದೆಯಲಿ ಕೊಂದ ಕರದಲ್ಲಿ ಜಪಮಾಲೆ ಧರಿಸಿ ಎಣಿಸುವದು
ದಾಸ ಸಾಹಿತ್ಯ ಪ್ರಕಾರ
ಬರೆದವರು