ಜೋಜೋ ಶ್ರೀಕೃಷ್ಣ ಪರಮಾನಂದ

ಜೋಜೋ ಶ್ರೀಕೃಷ್ಣ ಪರಮಾನಂದ

(ರಾಗ ಶಂಕರಾಭರಣ ತ್ರಿಪುಟ ತಾಳ) ಜೋಜೋ ಶ್ರೀಕೃಷ್ಣ ಪರಮಾನಂದ ಜೋಜೋ ಗೋಪಿಯ ಕಂದ ಮುಕುಂದ ಜೋಜೋ ||ಪ|| ಪಾಲಗಡಲೊಳು ಪವಡಿಸಿದವನೇ ಒಂ- ದಾಲದೆಲೆಯ ಮೇಲೆ ಮಲಗಿದ ಶಿಶುವೇ ಶ್ರೀಲತಾಂಗಿಯರ ಚಿತ್ತದೊಲ್ಲಭನೇ ಬಾಲ ನಿನ್ನನು ಪಾಡಿ ತೂಗುವೆನಯ್ಯ ಜೋಜೋ || ಹೊಳೆವಂಥ ರನ್ನದ ತೊಟ್ಟಿಲ ಮೇಲೆ ಥಳಥಳಿಸುವ ಗುರುಗುಂಜಿಯ ಮಾಲೆ ಅಳದೆ ನೀ ಪಿಡಿದಾಡೆನ್ನಯ ಮುದ್ದು ಬಾಲ ನಳಿನನಾಭನೆ ನಿನ್ನ ಪಾಡಿ ತೂಗುವೆನು ಜೋಜೋ || ಯಾರ ಕಂದ ನೀನಾರ ನಿಧಾನೀ ಆರ ರತ್ನವೊ ನೀನಾರ ಮಾಣಿಕವೋ ಸೇರಿತು ಎನಗೊಂದು ಚಿಂತಾಮಣಿ ಎಂದು ಪೋರ ನಿನ್ನನು ಪಾಡಿ ತೂಗುವೆನಯ್ಯ ಜೋಜೋ || ಗುಣನಿಧಿಯೇ ನಿನ್ನ ಎತ್ತಿಕೊಂಡಿದ್ದರೆ ಮನೆಯ ಕೆಲಸವಾರು ಮಾಡುವರಯ್ಯ ಮನಕೆ ಸುಖನಿದ್ರೆ ತಂದುಕೋ ಬೇಗ ಫಣಿಶಯನನೆ ನಿನ್ನ ಪಾಡಿ ತೂಗುವೆನುಓಜೋ || ಅಂಡಜವಾಹನ ಅನಂತಮಹಿಮ ಪುಂಡರೀಕಾಕ್ಷ ಶ್ರೀ ಪರಮಪಾವನ ಹಿಂಡು ದೈವದ ಗಂಡ ಉದ್ದಂಡನೆ ಪಾಂಡುರಂಗ ಶ್ರೀ ಪುರಂದರ ವಿಠಲ ||
ದಾಸ ಸಾಹಿತ್ಯ ಪ್ರಕಾರ
ಬರೆದವರು