ಹ್ಯಾಂಗೆ ಮಾಡಲಯ್ಯಾ, ಪೋಗುತಿದೆ ಆಯುಷ್ಯ !

ಹ್ಯಾಂಗೆ ಮಾಡಲಯ್ಯಾ, ಪೋಗುತಿದೆ ಆಯುಷ್ಯ !

ರಚನೆ : ಗೋಪಾಲದಾಸರು ಹ್ಯಾಂಗೆ ಮಾಡಲಯ್ಯಾ ಕೃಷ್ಣ ಪೋಗುತಿದೆ ಆಯುಷ್ಯ ಮಂಗಳಾಂಗ ಭವಭಂಗ ಬಿಡಿಸಿ ನಿನ್ನ ಡಿಂಗರಿಗನ ಮಾಡೊ ಅನಂಗಜನಕ ||ಪ|| ಏಸು ಜನುಮದ ಸುಕೃತದ ಫಲವೊ ತಾನು ಜನಿಸಲಾಗಿ ಭೂಸುರ ದೇಹದ ಜನುಮವು ಎನಗೆ ಸಂಭವಿಸಲಾಗಿ ಮೋದತೀರ್ಥ ಮತ ಚಿಹ್ನಿತನಾಗದೆ ದೋಷಕೆ ಒಳಗಾಗಿ ಲೇಶ ಸಾಧನವ ಕಾಣದೆ ದುಸ್ಸಹವಾಸದಿಂದಲೇ ದಿನದಿನ ಕಳೆದೆ ||೧|| ಶಶಿಮುಖಿ ಕನಕದ ಆಸೆಗೆ ಬೆರೆತು ವಸುಪತಿ ನಿನ್ನಡಿಯ ಹಸನಾಗಿ ನಿನ್ನ ನೆನೆಯದೆ ಕೃಪೆಯ ಗಳಿಸದೆ ಕೆಟ್ಟೆನಯ್ಯ ನಿಶಿಹಗಲು ಸ್ಥಿರವೆಂದು ತನುವನು ಪೋಷಿಸಲಾಶಿಸಿ ಜೀಯ ಉಸಿರಿದ ನೆಲವೊ ಸರ್ವಕಾಲ ನಿನ್ನೊಡೆತನ ಎಂಬುವ ಬಗೆಯನು ಅರಿಯದೆ ||೨|| ನೆರೆನಂಬಿದ ಪಾವಟೆಗಳು ಎಲ್ಲಾ ಸರಿದು ಪೋದವಲ್ಲ ಮರಳಿ ಈ ಪರಿ ಜನುಮವು ಬರುವ ಭರವಸೆಯಂತೂ ಇಲ್ಲ ಪರಿಪರಿ ವಿಷಯದ ಆಸೆಯು ನನಗೆ ಪಿರಿದು ಆಯಿತಲ್ಲ ಹರಿಯೆ ಜಗದಿ ನೀನೊಬ್ಬನಲ್ಲದೆ ಪೊರೆವರಿನ್ನಾರು ಇಲ್ಲವಲ್ಲ ||೩|| ಅವನಿಯೊಳಗೆ ಪುಣ್ಯಕ್ಷೇತ್ರ ಚರಿಸುವ ಹವಣಿಕೆ ಎನಗಿಲ್ಲ ಪವನಾತ್ಮಕ ಗುರು ಮಧ್ವಶಾಸ್ತ್ರದ ಪ್ರವಚನ ಕೇಳಲಿಲ್ಲ ತವಕದಿಂದ ಗುರುಹಿರಿಯರ ಸೇವಿಸಿ ಅವರ ಒಲಿಸಲಿಲ್ಲ ರವಿನಂದನ ಕೇಳಿದರುತ್ತರ ಕೊಡೆ ವಿವರ ಸರಕು ಒಂದಾದರಿಲ್ಲ ||೪|| ಭಾಗವತರೊಡಗೂಡಿ ಉಪವಾಸ ಜಾಗರ ಒಂದಿನ ಮಾಡಲಿಲ್ಲ ರಾಗದಿ ಶುಕಮುನಿ ಪೇಳಿದ ಹರಿಕಥೆ ಸಂಯೋಗವೆಂಬೋದಿಲ್ಲ ನೀಗುವಂಥ ಭವಭಯವ ಭಕುತಿ ವೈರಾಗ್ಯವೆಂಬೋದಿಲ್ಲ ಯೋಗಿವಂದ್ಯ ಗೋಪಾಲವಿಠಲ ತಲೆಬಾಗಿ ನಿನ್ನನೇ ಬೇಡಿಕೊಂಬೆ ||೫||
ದಾಸ ಸಾಹಿತ್ಯ ಪ್ರಕಾರ
ಬರೆದವರು