ಇವನ ಪಿಡಿದುಕೊಂಡು ಹೋಗೆಲೋ ಜೋಗಿ

ಇವನ ಪಿಡಿದುಕೊಂಡು ಹೋಗೆಲೋ ಜೋಗಿ

ಇವನ ಪಿಡಿದುಕೊಂಡು ಹೋಗೆಲೋ ಜೋಗಿ ಇವ ನಮ್ಮ ಮಾತು ಕೇಳದೆ ಪುಂಡನಾದ ||ಪ|| ಆಡುತಾಡುತ ಹೋಗಿ ನೀರಲ್ಲಿ ಮುಳುಗಿದ | ಬೇಡವೆಂದರೆ ಬೆಟ್ಟ ಬೆನ್ನಲ್ಲಿ ಪೊತ್ತ | ದಾಡೆಯ ಮೇಲೆ ತಾ ಧಾರುಣಿ ನೆಗಹಿದ | ನೋಡಿದವರಿಗೆ ಬಾಯ್ ತೆರೆದಂಜಿಸಿದ ||೧|| ಹುಲ್ಲಲ್ಲಿ ವಿಪ್ರನ ಕಣ್ಣು ತಿವಿದ ಬುದ್ಧಿ | ಅಲ್ಲವೆಂದರೆ ಕೈಲಿ ಕೊಡಲಿಯ ಪಿಡಿದಾ | ಬಿಲ್ಲು ಪಿಡಿದು ಬಲು ರಕ್ಕಸರ ಸವರಿದ | ಬಲ್ಲಿದ ಮಾವನ ಶಿರವ ಛೇದಿಸಿದ ||೨|| ಬೆತ್ತಲೆ ಕುದುರೆಯ ಹತ್ತಬೇಡೆಂದರೆ | ಹತ್ತಿದನು ಈತ ಛಂದದಿಂದ | ಭಕ್ತವತ್ಸಲ ನಮ್ಮ ಪುರಂದರ ವಿಠಲನ | ಎತ್ತಲಾದರೂ ಕೊಂಡು ಹೋಗೆಲೋ ಜೋಗಿ ||೩ ||
ದಾಸ ಸಾಹಿತ್ಯ ಪ್ರಕಾರ
ಬರೆದವರು