ಕಾಳಿಯ ಮರ್ದನ ರಂಗಗೆ ಹೇಳೆ
ಪಲ್ಲವಿ:
ಕಾಳಿಯ ಮರ್ದನ ರಂಗಗೆ ಹೇಳೆ ಗೋಪಮ್ಮ ಬುದ್ಧಿ
ಕೇಳಲೊಲ್ಲನು ಎನ್ನ ಮಾತನು
ಚರಣ:
ದಿಟ್ಟ ನೀರೊಳು ಕಣ್ಣ ಮುಚ್ಚನೆ ಹೋಗಿ ಬೆಟ್ಟಕೆ ಬೆನ್ನಾತು ನಿಂತನೆ
ಸಿಟ್ಟಲಿ ಕೋರೆದಾಡೆ ತಿವಿದನೆ ಅಹ ಗಟ್ಟಿ ಉಕ್ಕನು ಒಡೆದು ಬಂದನೆ
ಮೂರಡಿ ಭೂಮಿಯ ಬೇಡಿದನೆ ನೃಪರ ಬೇರನಳಿಯ ಕೊಡಲಿ ಪಿಡಿದನೆ
ನಾರಮಡಿಯನಿಟ್ಟು ಬಂದನೆ ಅಹ ಚೋರತನದಿ ಪಾಲ್ ಬೆಣ್ಣೆಯ ತಿಂದನೆ
ಬತ್ತಲೆ ನಾರಿಯರನಪ್ಪಿದ ಹೋಗಿ ಉತ್ತಮಾಶ್ವವವನು ಹತ್ತಿದ
ಹತ್ತವತಾರ ತಾಳಿದ ನಮ್ಮ ಭಕ್ತವತ್ಸಲ ಸ್ವಾಮಿ ಪುರಂದರ ವಿಠಲನು
ದಾಸ ಸಾಹಿತ್ಯ ಪ್ರಕಾರ
ಬರೆದವರು
ಬಗೆ
- Log in to post comments