ಅರಿತುಕೊಳ್ಳಿರೊ ಬ್ಯಾಗ ಹರಿಯ ನಾಮಾಮೃತ

ಅರಿತುಕೊಳ್ಳಿರೊ ಬ್ಯಾಗ ಹರಿಯ ನಾಮಾಮೃತ

(ಕಾಫಿ ರಾಗ ತೀನ್ ತಾಳ) ಅರಿತುಕೊಳ್ಳಿರೊ ಬ್ಯಾಗ ಹರಿಯ ನಾಮಾಮೃತ ದೊರಕುವದಲ್ಲಿದು ನೋಡಿ ಸರ್ಕನೆ ಸರ್ವರಿಗೆಲ್ಲ ||ಧ್ರುವ|| ಗುರುಕರುಣಕೃಪೆಯಿಂದ ಪರಮದಿವ್ಯಾಮೃತವು ಸುರಿಸುರಿದು ಚಪ್ಪರಿದು ಸೂರ್ಯಾಡಿ ಸಾರಸವ ||೧|| ಅನುದಿನ ಸೇವಿಸುವ ಅನುಭವಿಗಳೂಟ ಏನೆಂದುಸುರಲಿ ನಾ ಅನಂದೋಬ್ರಹ್ಮವಾ ||೨|| ಎಂದಿಗೆ ಬಾಹುದು ನೋಡಿ ಸಂದಿಸಿ ಮಾನವಜನ್ಮ ಚಂದ ಮಾಡಿಕೊಳ್ಳಿರೊ ಬಂದ ಕೈಯಲಿ ಬ್ಯಾಗ ||೩|| ಆಲಸ್ಯಮಾಡಬ್ಯಾಡಿ ವಾಲ್ಗೈಸಿಕೊಳ್ಳಲಿಕ್ಕೆ ಸುಲಲಿತವಾಗಿಹುದು ತಿಳಿದುಕೊಂಬವರಿಗೆ ||೪|| ಇರುಳ್ಹಗಲ ಪೂರ್ಣ ಸುರುವುತಿಹ ಅಮೃತ ತರಳ ಮಹಿಪತಿ ಪ್ರಾಣ ಹೊರೆವ ಸಂಜೀವನ ||೫||
ದಾಸ ಸಾಹಿತ್ಯ ಪ್ರಕಾರ
ಬರೆದವರು