ಭಾಗ್ಯದ ಲಕ್ಷ್ಮೀ ಬಾರಮ್ಮಾ

ಭಾಗ್ಯದ ಲಕ್ಷ್ಮೀ ಬಾರಮ್ಮಾ

ಭಾಗ್ಯದ ಲಕ್ಷ್ಮೀ ಬಾರಮ್ಮಾ ನಮ್ಮಮ್ಮ ನೀ ಸೌ ||ಪಲ್ಲವಿ|| ಹೆಜ್ಜೆಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆ ಕಾಲ್ಗಳ ಧ್ವನಿಯ ತೋರುತ ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ || ೧|| ಕನಕ ವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೇ ದಿನಕರ ಕೋಟಿ ತೇಜದಿ ಹೊಳೆವ ಜನಕರಾಯನ ಕುಮಾರಿ ಬೇಗ ||೨|| ಅತ್ತಿತ್ತಲಗಲದೆ ಭಕ್ತರ ಮನೆಯಲಿ ನಿತ್ಯ ಮಹೋತ್ಸವ ನಿತ್ಯ ಸುಮಂಗಳ ಸತ್ಯವ ತೋರುವ ಸಾಧು ಸಜ್ಜನರ ಚಿತ್ತದಿ ಹೊಳೆವಾ ಪುತ್ಥಳಿ ಬೊಂಬೆ ||೩|| ಸಂಖ್ಯೆ ಇಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯ ತಿರುವುತ ಬಾರೆ ಕುಂಕುಮಾಂಕಿತೆ ಪಂಕಜ ಲೋಚನೆ ವೆಂಕಟರಮಣನ ಬಿಂಕದ ರಾಣೀ ||೪|| ಸಕ್ಕರೆ ತುಪ್ಪದ ಕಾಲುವೆ ಹರಿಸಿ ಶುಕ್ರವಾರದ ಪೂಜೆಯ ವೇಳೆಗೆ ಅಕ್ಕರೆಯುಳ್ಳ ಅಳಗಿರಿ ರಂಗನ ಚೊಕ್ಕ ಪುರಂದರ ವಿಠಲನ ರಾಣಿ ||೫||
ದಾಸ ಸಾಹಿತ್ಯ ಪ್ರಕಾರ
ಬರೆದವರು