ಎನಗೂ ಆಣೆ ರಂಗ ನಿನಗೂ ಆಣೆ

ಎನಗೂ ಆಣೆ ರಂಗ ನಿನಗೂ ಆಣೆ

( ರಾಗ ಶಂಕರಾಭರಣ. ತ್ರಿಪುಟ ತಾಳ) ಎನಗೂ ಆಣೆ ರಂಗ ನಿನಗೂ ಆಣೆ ||ಪ|| ಎನಗೂ ನಿನಗೂ ಇಬ್ಬರಿಗೂ ಭಕ್ತರಾಣೆ ||ಅ|| ನಿನ್ನ ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ ರಂಗ ಎನ್ನ ನೀ ಕೈಬಿಟ್ಟು ಪೋದರೆ ನಿನಗೆ ಆಣೆ || ತನು ಮನ ಧನದಲಿ ವಂಚಕನಾದರೆ ಎನಗೆ ಆಣೆ ರಂಗ ಮನಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ || ಕಾಕು ಮನುಜರ ಸಂಗವ ಮಾಡಿದರೆನಗೆ ಆಣೆ ರಂಗ ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ || ಶಿಷ್ಟವ ಸಂಗವ ಮಾಡದಿದ್ದರೆ ಎನಗೆ ಆಣೆ ರಂಗ ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ || ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ ರಂಗ ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ ||
ದಾಸ ಸಾಹಿತ್ಯ ಪ್ರಕಾರ
ಬರೆದವರು