ಮುಪ್ಪಿನ ಗಂಡನ ಒಲ್ಲೆನು
(ರಾಗ ಆನಂದಭೈರವಿ ಅಟತಾಳ )
ಮುಪ್ಪಿನ ಗಂಡನ ಒಲ್ಲೆನು ನಾನು ||ಪ||
ತಪ್ಪದೆ ಪಡಿಪಾಟ ಪಡಲಾರೆನಕ್ಕ ||ಅ||
ಉದಯದಲ್ಲೇಳಬೇಕು ಉದಕ ಕಾಸಲುಬೇಕು
ಬದಿಯಲ್ಲಿ ನಾನಿದ್ದು ಬಜೆ ಅರೆಯಬೇಕು
ಹದನಾಗಿ ಎಲೆ ಸುಣ್ಣ ಅಡಿಕೆ ಕುಟ್ಟಲುಬೇಕು
ಬಿದಿರುಕೋಲನು ತಂದು ಮುಂದೆ ಇಡಬೇಕಕ್ಕ ||
ಮೆತ್ತನೆ ರೊಟ್ಟಿ ಮುದ್ದೆಯ ಮಾಡಲುಬೇಕು
ಒತ್ತಿ ಒದರಿ ಕೂಗಿ ಕರೆಯಲುಬೇಕು
ವಾಕರಿಕೆಯು ಮೂಗಿನ ಸಿಂಬಳ
ಮತ್ತೆ ವೇಳೆಗೆ ಎದ್ದು ತೊಳೆಯಬೇಕಕ್ಕ ||
ಗೋಣಿ ಹಾಸಲುಬೇಕು ಬೆನ್ನ ಗುದ್ದಲುಬೇಕು
ಗೋಣು ಹಿಡಿದು ಮೇಲಕ್ಕೆತ್ತಬೇಕು
ಶ್ರೀನಿಧಿ ಪುರಂದರವಿಠಲನ್ನ ನೆನೆಯುತ್ತ
ನಾನೊಂದು ಮೂಲೇಲಿ ಒರಗಬೇಕಕ್ಕ ||
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments