ಕಂಡು ಕಂಡು ನೀಯೆನ್ನ ಕೈಬಿಡುವರೆ

ಕಂಡು ಕಂಡು ನೀಯೆನ್ನ ಕೈಬಿಡುವರೆ

ರಾಗ ಮೋಹನ/ಖಂಡಚಾಪು ಕಂಡು ಕಂಡು ನೀಯೆನ್ನ ಕೈಬಿಡುವರೆ ಪುಂಡರೀಕಾಕ್ಷ ಪುರುಷೋತ್ತಮ ಹರೇ || ಪಲ್ಲವಿ || ಬಂಧುಗಳು ಎನಗಿಲ್ಲ ಬದುಕಿನಲಿ ಸುಖವಿಲ್ಲ ನಿಂದೆಯಲಿ ನೊಂದೆನೈ ನೀರಜಾಕ್ಷ ತಂದೆತಾಯಿಯು ನೀನೆ ಬಂಧುಬಳಗವು ನೀನೆ ಎಂದೆಂದಿಗೂ ನಿನ್ನ ನಂಬಿದೆನೋ ಕೃಷ್ಣ || ೧ || ಕ್ಷಣವೊಂದು ಯುಗವಾಗಿ ತೃಣಕಿಂತ ಕಡೆಯಾಗಿ ಎಣಿಸಲಾರದ ಭವದಿ ನೋಂದಿಹೆ ನಾನು ಸನಕಾದಿ ಮುನಿವೃಂದ್ಯ ವನಜಸಂಭವ ಜನಕ ಫಣಿಶಾಯಿ ಪ್ರಹ್ಲಾದಗೊಲಿದ ಶ್ರೀ ಕೃಷ್ಣ || ೩ || ಭಕ್ತವತ್ಸಲನೆಂಬ ಬಿರುದ ಪೊತ್ತಾ ಮೇಲೆ ಭಕ್ತರಾಧೀನನಾಗಿರಬೇಡವೆ ಮುಕ್ತಿದಾಯಕ ನೀನು ಹೊನ್ನುರುಪುರವಾಸ ಶಕ್ತಗುರು ಪುರಂದರವಿಠಲ || ೩ || ~~~*~~~ [ಪುರಂದರ ಸಾಹಿತ್ಯ ದರ್ಶನ - ಭಾಗ ೧]
ದಾಸ ಸಾಹಿತ್ಯ ಪ್ರಕಾರ
ಬರೆದವರು