ಪುರಂದರ ದಾಸರ ಆರಾಧನೆ
- Read more about ಪುರಂದರ ದಾಸರ ಆರಾಧನೆ
- Log in to post comments
ಪುರಂದರದಾಸರ ಕುರಿತು.
ನೀವು ಏನು ಬೇಕಾದ್ರೂ ಹೇಳಿ, ಪುರಂದರ ದಾಸರು ಅಂದ್ರೆ ನಂಗಿಷ್ಟ. ವ್ಯಾಸೋಚ್ಛಿಷ್ಟಂ ಜಗತ್ಸರ್ವಂ ಅನ್ನೋ ಮಾತಿದೆ. ಅಂದ್ರೆ, ವ್ಯಾಸರು ಹೇಳಿ ಬಿಟ್ಟುಳಿದದ್ದೇ ಈ ಜಗತ್ತಲ್ಲಿರೋದೆಲ್ಲ ಅಂತ. ಮಹಾಭಾರತ ಬರೆಯೋದಲ್ದೆ, ವೇದಗಳನ್ನ ನಾಕು ಪಾಲು ಮಾಡಿ ವಿಂಗಡಿಸಿದ್ದೇ ವ್ಯಾಸರು, ಮತ್ತೆ ಹದಿನೆಂಟು ಪುರಾಣಗಳನ್ನೂ ಬರ್ದಿದ್ದೂ ಅವರೇ ಅಂತ ನಂಬಿಕೆ ಇದೆಯಲ್ಲ. ನನಗೆ ಬಿಡಿ - ವೇದ ಓದಿದರೆ ನೇರವಾಗಿ ಅರ್ಥವಾಗೋಲ್ಲ. ಪುರಾಣ ಓದೋದಕ್ಕೆ ವೇಳೆ ಸಾಲದು. ಅದಕ್ಕೇ ನಾನು ’ದಾಸೋಚ್ಛಿಷ್ಟಂ ಜಗತ್ಸರ್ವಂ’ ಅಂದ್ಕೊಂಡ್ಬಿಡ್ತೀನಿ. ಯಾಕೆ ಅಂತೀರಾ? ’ದಾಸರೆಂದರೆ ಪುರಂದರ ದಾಸರಯ್ಯ” ಅನ್ನೋ ಮಾತನ್ನ ಅವರ ಗುರುಗಳೇ ಹೇಳಿಬಿಟ್ಟಿರೋದ್ರಿಂದ, ಈ ದಾಸರು ಯಾರು ಅಂತ ನಾನು ಬಿಡಿಸಿ ಹೇಳ್ಬೇಕಿಲ್ಲ. ಅಲ್ವಾ?
ಪುರಂದರ ದಾಸರು ಬರ್ದಿರೋದೆಲ್ಲ ಕನ್ನಡದಲ್ಲಿ. ಓದಿದ್ರೆ, ನನಗೆ ಅರ್ಥವಾಗೋದೇನೂ ಕಷ್ಟವಿಲ್ಲ. ಅಲ್ದೆ, ಅವ್ರೇನೂ ಸರ್ಗದ ಮೇಲೆ ಸರ್ಗ ಕವಿತೆ ಹೊಸೆದಂತ ಕಾಳಿದಾಸನ ಹಾಗೆ ದೊಡ್ಡ ದೊಡ್ಡ ಕಾವ್ಯಗಳನ್ನೂ ಬರೆದಿಲ್ಲ. ಅದು ಬಿಡಿ ಕುಮಾರವ್ಯಾಸ ಹರಿಹರ ರಾಘವಾಂಕ ರತ್ನಾಕರವರ್ಣಿಯರ ಹಾಗೆ ಸಾಂಗತ್ಯ ರಗಳೆ ಷಟ್ಪದಿಯ ಗೊಡವೆಗೂ ಅವರು ಹೋಗಿಲ್ಲ. ಏನಿದ್ರೂ ಅವರು ಬರೆದಿರೋದು ಸಣ್ಣ ಸಣ್ಣ ಹಾಡುಗಳು. ಒಂದು ಓದಿದ್ಮೇಲೆ ಇನ್ನೊಂದು ಇದನ್ನೇ ಓದ್ಬೇಕು ಅನ್ನೋದಕ್ಕೆ ಅಲ್ಯಾವ ಕಥೇನೂ ಇರೋದಿಲ್ಲ. ಅಲ್ದೆ ಸರಿಸುಮಾರು ಅರ್ಥವಾಗ್ದಿರೋ ಪದಗಳೂ ಅಲ್ಲೊಂದು ಇಲ್ಲೊಂದು ಹೊರತು ನಾನೇನೂ ಪಕ್ದಲ್ಲಿ ನಿಘಂಟು ಇಟ್ಕೊಂಡು ಕೂರ್ಬೇಕಾಗಿಲ್ಲ. ಇದೇಕಾರಣಕ್ಕೆ ಆದಾದಾಗ ಒಂದೊಂದು ಹೊಸ ಹಾಡನ್ನ ಓದಿ ನೋಡೋದು ಅಂದ್ರೆ ನನಗಂತೂ ಬಹಳ ಹಿಡಿಸುತ್ತೆ.
ಡಿಜಿಟಲ್ ಲೈಬ್ರರಿ ಆಫ್ ಇಂಡಿಯಾದ ಈ ಪುಸ್ತಕದಲ್ಲಿ ತುಳು ಭಾಷೆಗೆ ಅನುವಾದಿತ ಪುರಂದರದಾಸರ ಕೆಲವು ಕೀರ್ತನೆಗಳಿವೆ .
ಪುಸ್ತಕಕ್ಕಾಗಿ ಇಲ್ಲಿ ಕ್ಲಿಕ್ಕಿಸಿ .
http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=5010010007402