ಆನಂದಮಯಗೆ ಚಿನ್ಮಯಗೆ
ಆನಂದಮಯಗೆ ಚಿನ್ಮಯಗೆ
ಶ್ರೀಮನ್ನಾರಾಯಣಗೆ ಆರತಿ ಎತ್ತಿರೆ||
ವೇದವ ತಂದು ಬೆಟ್ಟವ ಪೊತ್ತು ಧರಣೀಯ
ಸಾಧಿಸಿ ಕಂಭದೊಳುದಿಸಿದಗೆ|
ಭೂದಾನವ ಬೇಡಿ ನೃಪರ ಸಂಹರಿಸಿದ
ಆದಿ ಮೂರುತಿಗೆ ಆರತಿ ಎತ್ತಿರೆ||
ಇಂದುವದನೆ ಸೀತೆ ಸಹಿತಲರಣ್ಯದಿ
ನಂದಗೋಕುಲದಲ್ಲಿ ನಲಿದವಗೆ|
ಮಂದಗಮನೆಯರ ಮುಂದೆ ನಿರ್ವಾಣದಿ
ನಿಂದ ಮೂರುತಿಗೆ ಆರತಿ ಎತ್ತಿರೆ||
ತುರಗವನೇರಿ ದೈತ್ಯರ ಸೀಳಿ ಸುಜನರ
ಪೊರೆವ ಮಂಗಳ ಹಯವದನನಿಗೆ|
ವರದ ಯಾದವಗಿರಿ ಆದಿ ನಾರಾಯಣ
ಚರಣ ಕಮಲಕೆ ಆರತಿ ಎತ್ತಿರೆ||
ಸೂಚನೆ: ಈ ಹಾಡನ್ನು ಹೆಚ್ಚಾಗಿ ಮಧ್ಯಮಾವತಿ ರಾಗದಲ್ಲಿ ಹಾಡುತ್ತಾರೆ.
ದಾಸ ಸಾಹಿತ್ಯ ಪ್ರಕಾರ
ಬರೆದವರು
- Log in to post comments