ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ

ತೊಳಸದಕ್ಕಿಯ ತಿಂಬ ಕಿಲುಬು ತಳಿಗೆಯಲುಂಬ ಕೊಳಗದಲಿ ಹಣಗಳನು ಅಳೆದು ಕೊಂಬ ಇಲ್ಲ ಕಾಸು ಎಂದು ಸುಳ್ಳು ಮಾತಾಡಿದರೆ ಎಲ್ಲವನು ಕಸುಕೊಂಬ ಕಳ್ಳದೊರೆಗೆ ಜಯ ಮಂಗಳಂ| ನಿತ್ಯ ಶುಭ ಮಂಗಳಂ| ತನ್ನ ನೋಡೇನೆಂದು ಮುನ್ನೂರು ಗಾವುದ ಬರಲು ತನ್ನ ಗುಡಿಯ ಪೊಕ್ಕ ಜನರಿಗೆಲ್ಲ ಹೊನ್ನು ಹಣಗಳ ಕಸಿದು ತನ್ನ ದರುಶನ ಕೊಡದೆ ಬೆನ್ನೊಡೆಯ ಹೊಯ್ಯಿಸುವ ಅನ್ಯಾಯಕಾರಿಗೆ ಜಯ ಮಂಗಳಂ| ನಿತ್ಯ ಶುಭ ಮಂಗಳಂ| ಗಿಡ್ಡ ಹಾರುವನಾಗಿ ಒಡ್ಡಿ ದಾನವ ಬೇಡಿ ದುಡ್ಡು ಕಾಸುಗಳಿಗೆ ಕೈಯ ನೀಡಿ ಅಡ್ಡ ಬಿದ್ದ ಜನರ ವಿಡ್ದೂರಗಳ ಕಳೆದು ದೊಡ್ಡವರ ಮಾಳ್ಪ ಸಿರಿ ವಿಜಯ ವಿಠಲಗೆ ಜಯ ಮಂಗಳಂ| ನಿತ್ಯ ಶುಭ ಮಂಗಳಂ| (ಸಂದರ್ಭ : ತಿರುಪತಿಯಲ್ಲಿ, ಬ್ರಹ್ಮೋತ್ಸವ ಸಮಯದಲ್ಲಿ, ವಿಜಯದಾಸರಿಗೆ ದೈವ ದರುಶನ ದೊರೆಯದಿದ್ದಾಗ, ದೇವರನ್ನು ಉದ್ದೇಶಿಸಿ ಹಾಡಿದ ಪದವಿದೆಂದು ಹೇಳಲಾಗುತ್ತದೆ.)
ದಾಸ ಸಾಹಿತ್ಯ ಪ್ರಕಾರ
ಬರೆದವರು